ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಲಿಸುತ್ತಿದ್ದ ಆಟೋ ಮೇಲೆ ಮರವೊಂದು ಉರುಳಿ ಬಿದ್ದು, ಚಾಲಕ ಸೇರಿ ಇಬ್ಬರಿಗೆ ಗಾಯಗಳಾಗಿರುವ ಘಟನೆ ಸದಾಶಿವನಗರ ಪೊಲೀಸ್ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ಗಾಯಾಳು ಜೀವ ಎಂ ಅವರು ಖಾಸಗಿ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಟೋ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ, ನಿನ್ನೆ ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಆಟೋ ಜೊತೆಗೆ ಮತ್ತೊಂದು ವಾಹನಕ್ಕೂ ಹಾನಿಯಾಗಿದ್ದು, ಚಾಲಕನ ಕೈ ಮೂಳೆ ಮುರಿತಗೊಂಡಿದೆ ಎಂದು ತಿಳಿದುಬಂದಿದೆ. ಆಗಸ್ಟ್ 12 ರಿಂದ ಈ ವರೆಗೂ ಒಟ್ಟು 3 ಘಟನೆಗಳು ವರದಿಯಾಗಿವೆ.