RAIN EFFECT | ಹಳಿ ಮೇಲೆ ಬಿದ್ದ ಮರ, ಈ ಲೈನ್‌ನಲ್ಲಿ ಮೆಟ್ರೋ ಸಂಚಾರ ವ್ಯತ್ಯಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೆಟ್ರೋ ಹಳಿ ಮೇಲೆ ಮರ ಬಿದ್ದ ಕಾರಣ ಮಂಗಳವಾರ ಬೆಳ್ಳಂಬೆಳಗ್ಗೆ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಅಡಚಣೆಯಾಯಿತು.

ಬೆಳಿಗ್ಗೆ 6.15 ರ ಸುಮಾರಿಗೆ ನೇರಳೆ ಮಾರ್ಗದ ಎಸ್‌ವಿ ರಸ್ತೆ ಮತ್ತು ಇಂದಿರಾನಗರ ನಡುವೆ ಹಳಿಯ ಮೇಲೆ ಒಂದು ಮರ ಬಿದ್ದಿದೆ. ಪರಿಣಾಮವಾಗಿ ಮೆಟ್ರೋ ಸಂಚಾರಕ್ಕೆ ತಾತ್ಕಾಲಿಕವಾಗಿ ಅಡ್ಡಿಯಾಯಿತು. ನಂತರ ಬಿಎಂಆರ್​ಸಿಎಲ್ ಅಧಿಕಾರಿಗಳು, ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ಮಾಡಿ ಮೆಟ್ರೋ ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಅಡಚಣೆಯ ಸಂದರ್ಭದಲ್ಲಿ ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಟು ವೈಟ್ ಫೀಲ್ಡ್‌, ಎಂ ಜಿ ರಸ್ತೆ ಟು ಚಲ್ಲಘಟ್ಟ ನಡುವೆ ಮಾತ್ರ ರೈಲುಗಳು ಸಂಚಾರ ಮಾಡಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!