ಎರಡು ಅಂತಸ್ಥಿನ ಕಟ್ಟಡ ಕುಸಿತ: ಇಬ್ಬರ ಸಾವು, ಐವರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿರುವ ಘಟನೆ ಭಿವಂಡಿಯಲ್ಲಿ ನಡೆದಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಏಳು ಜನರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯ ಧೋಬಿ ತಾಲಾವ್ ಸ್ಟೇಡಿಯಂ ಬಳಿ ಇಂದು ನಸುಕಿನ ವೇಳೆ ಈ ದುರಂತ ಘಟನೆ ನಡೆದಿದೆ. ಮಾಹಿತಿ ಪಡೆದ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಥಾಣೆ ವಿಪತ್ತು ನಿರ್ವಹಣಾ ಪಡೆ ಮತ್ತು ಭಿವಂಡಿ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಿಸಿದರು.

ಅವಶೇಷಗಳಡಿ ಎರಡು ಮೃತದೇಹಗಳು ಪತ್ತೆಯಾಗಿದ್ದು, ಗಂಭೀರವಾಗಿ ಗಾಯಗೊಂಡ ಐದು ಜನರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!