ಚರಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು

ಹೊಸದಿಗಂತ ವರದಿ,  ವಿಜಯಪುರ:

ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವಿಗೀಡಾದ ಘಟನೆ ನಗರದ ಜೆಎಂ ರಸ್ತೆಯಲ್ಲಿ ನಡೆದಿದೆ.

ಇಲ್ಲಿನ ಯಾಸೀನ್ ಸದ್ದಾಂ ಮುಲ್ಲಾ (2) ಮೃತ ಬಾಲಕ.

ಈ ಅವಘಡಕ್ಕೆ ಮಹಾನಗರ ಪಾಲಿಕೆಯ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ.

ಕೆಲ ದಿನಗಳ ಹಿಂದ ಭಾರೀ ಮಳೆ ಬಿದ್ದಿದಕ್ಕೆ ಚರಂಡಿ ಮೇಲಿನ ಕಲ್ಲು ತೆಗೆಯಲಾಗಿತ್ತು, ಅನಂತರ ಚರಂಡಿ ಮೇಲಿನ ಕಲ್ಲು ಮುಚ್ಚದಿರುವುದೆ ಈ ಅವಘಡಕ್ಕೆ ಕಾರಣ ಎಂದು ದೂರಲಾಗಿದೆ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!