ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಸರಕಾರದ ಎಲ್ಲಾ ಯೋಜನೆಗಳಿಗೆ ಈ ಬಾರಿಯ ಬಜೆಟ್ ನಲ್ಲಿ ಎಳ್ಳು ನೀರು ಬಿಡಲಾಗಿದೆ. ರಾಜ್ಯದಲ್ಲಿ ಉಡುಪಿ, ದ.ಕ. ಜಿಲ್ಲೆಗಳು ಇವೆ ಎಂಬುದನ್ನು ಸರಕಾರ ಮರೆತಂತಿದೆ ಕೃಷಿ ಭೂಮಿ ಮಾರಾಟ ಕಾಯ್ದೆ ರದ್ದುಗೊಳಿಸಿದ ಪರಿಣಾಮವಾಗಿ ಕೈಗಾರಿಕೆಗಳ ಬೆಳವಣಿಗೆ ಕುಂಠಿತವಾಗಲಿಡೇ ಎಂದು ಎಂದು ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿದ ಅವರು , ಜಿಲ್ಲೆಗೊಂದು ಗೋಶಾಲೆ ರದ್ದು ಮಾಡಿ ಗೋವಿನ ರಕ್ಷಣೆಗೆ ಈಗಿನ ಸರಕಾರ ಇಲ್ಲ ಎಂಬುದನ್ನು ಸಾಬೀತು ಪಡಿಸಿದೆ.ಗ್ಯಾರಂಟಿ ಯೋಜನೆಗಳಿಗೆ ಹಣ ಜೋಡಿಸುವ ಭರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಳ್ಳಲಿದೆ. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರವನ್ನು ಕಡೆಗಣಿಸಲಾಗಿದೆ.ಇದು ತೀರಾ ನಿರಾಶದಾಯಕ ಬಜೆಟ್ ಆಗಿದೆ ಎಂದು ಅಭಿಪ್ರಾಯಪಟ್ಟರು.