October 15, 2026
Thursday, October 15, 2026
spot_img

ಕಾವೇರಿ ಕದನಕ್ಕೆ ಬಹುಮುಖ್ಯ ದಿನ: ಇಂದು ಸಿಡಬ್ಲುಎಮ್‌ಎ ಮಹತ್ವದ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಕಾವೇರಿ ಕದನದ ಕಿಚ್ಚು ಜೋರಾಗಿದೆ, ತಮಿಳುನಾಡಿಗೆ ನೀರು ಬಿಡಲು ನಾವು ಬಿಡುವುದಿಲ್ಲ ಎಂದು ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಇಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮಹತ್ವದ ಸಭೆ ನಡೆಯಲಿದೆ.

ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಶಿಫಾರಸ್ಸನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಇಂದು ವಿಚಾರಣೆಗೆ ಬರಲಿದೆ.

ತಮಿಳುನಾಡಿಗೆಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ CWRC ಶಿಫಾರಸು ಮಾಡಿದೆ. ಆದರೆ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ, ಬರ ಇರುವ ಕಾರಣ ಅಷ್ಟೊಂದು ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ. ಮಳೆ ಕೊರತೆಯಿಂದಾಗಿ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಕನಿಷ್ಠ ಮಟ್ಟದ ನೀರಷ್ಟೇ ಇದೆ. ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕಾವೇರಿ ಕೊಳ್ಳದ ಜನರಿಗೆ ಕುಡಿಯುವ ನೀರಿಗೇ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ತಮಿಳುನಾಡಿಗೆ ನೀರು ಬಿಡುವುದು ಅಸಾಧ್ಯ ಎಂದು ರಾಜ್ಯ ಸರ್ಕಾರ ಬಲವಾದ ವಾದ ಮಂಡಿಸಲಿದೆ.

Must Read