ಮಡಿಕೇರಿಯಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ತುಳಿತಕ್ಕೆ ಓರ್ವ ಬಲಿ

ದಿಗಂತ ವರದಿ ಮಡಿಕೇರಿ:

ಕಾಡಾನೆ ತುಳಿತಕ್ಕೆ ಓರ್ವ ಬಲಿಯಾದ ಘಟನೆ ದಕ್ಷಿಣ ಕೊಡಗಿನ ಬೀರುಗ ಗ್ರಾಮದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಬೀರುಗ ಗ್ರಾಮದ ಅಯ್ಯಮಾಡ ಮಾದಯ್ಯ( ಬೊಗ್ಗ-63) ಎಂಬವರೇ ಆನೆ ತುಳಿತಕ್ಕೆ ಬಲಿಯಾದವರು.
ಬೀರುಗ ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯಲ್ಲಿ ಬೆಳಗ್ಗೆ 6.45 ರ ಸುಮಾರಿಗೆ ತೋಟಕ್ಕೆ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದ್ದು, ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಬೀರುಗ ಹಾಗೂ ಕುರ್ಚಿ ಭಾಗದಲ್ಲಿ 40ಕ್ಕೂ ಹೆಚ್ಚು ಕಾಡನೆಗಳು ವಿವಿಧ ತೋಟಗಳಲ್ಲಿ ಬೀಡು ಬಿಟ್ಟಿದ್ದು, ಈ ಬಗ್ಗೆ ಇದುವರೆಗೆ ಅರಣ್ಯ ಇಲಾಖೆ ಯಾವುದೇ ಕ್ರಮಕೈಗೊಂಡಿಲ್ಲ ರೈತರು, ಕಾಫಿ ಬೆಳೆಗಾರರು ಹಾಗೂ ಕಾರ್ಮಿಕರು ಇಲ್ಲಿ ಬದುಕುವುದೇ ಕಷ್ಟವಾಗಿದೆ. ವನ್ಯಪ್ರಾಣಿಗಳ ಉಪಟಳದಿಂದ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ರೈತ ಸಂಘದ ಮುಖಂಡ ಅಜ್ಜಮಾಡ ಚಂಗಪ್ಪ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!