ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಂಗಭದ್ರಾ ಜಲಾಶಯದ ನೀರು ಇದೀಗ ಸಂಪೂರ್ಣ ಮಲೀನವಾಗಿದೆ, ಹಸಿರು ಬಣ್ಣಕ್ಕೆ ತಿರುಗಿದೆ. ಕುಡಿಯಲು ಯೋಗ್ಯವಲ್ಲದ ಈ ಜಲಾಶಯದ ನೀರು ಮೂರು ರಾಜ್ಯಗಳ 8 ಜಿಲ್ಲೆಗಳ ಜನರಿಗೆ ಅನಿವಾರ್ಯವಾಗಿದೆ.
ಈಗಾಗಲೇ ಸಾಕಷ್ಟು ಬಾರಿ ತುಂಗಭದ್ರಾ ಜಲಾಶಯದ ನೀರು ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದಿದೆ. ಅಷ್ಟೇ ಅಲ್ಲದೆ ನೀರು ಮಲೀನಗೊಂಡಿದ್ದರಿಂದ ಮೀನುಗಳು ಆಮ್ಲಜನಕದ ಕೊರತೆಯಿಂದ ಸಾಯುತ್ತಿವೆ. ಕಾರ್ಖಾನೆಗಳು ಹಾಗೂ ನಗರಗಳ ತ್ಯಾಜ್ಯವನ್ನು ನದಿಗೆ ಹರಿಬಿಟ್ಟಿದ್ದರಿಂದ ನೀರು ಹಸಿರು ಬಣ್ಣಕ್ಕೆ ತಿರುಗಿದೆ ಎಂದು ಹೇಳಲಾಗಿದೆ.
ಅದೇನೇ ಆಗಲಿ ತುಂಗಭದ್ರಾ ಜಲಾಶಯಕ್ಕೆ ಜಲಕಂಟಕ ಎದುರಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಾಗಲಿ, ಸರ್ಕಾರವಾಗಲಿ ಏನು ಕ್ರಮ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.