ಸ್ಕೂಟರಲ್ಲಿ‌ ಬರುತ್ತಿದ್ದ ಪೆಟ್ರೋಲ್ ಬಂಕ್ ಮ್ಯಾನೇಜರ್ ಮೇಲೆ ಹಠಾತ್ ದಾಳಿ ನಡೆಸಿದ ಕಾಡು ಹಂದಿ

ದಿಗಂತ ವರದಿ ಪುತ್ತೂರು:

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ
ಮಣ್ಣಾಪು ಎಂಬಲ್ಲಿ ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರ ಕುಂಬ್ರ ಪೆಟ್ರೋಲ್ ಬಂಕ್ ನ ಮ್ಯಾನೇಜ‌ರ್ ಆಗಿರುವ ಧನುಷ್ ಎಂಬವರು ತೀವ್ರ ಗಾಯಗೊಂಡ ಘಟನೆ ಆ.20ರ ಬೆಳಗ್ಗಿನ ಜಾವ ನಡೆದಿದೆ.

ಧನುಷ್‌ ಅವರು ಎಂದಿನಂತೆ ಬೆಳಗ್ಗೆ ಸ್ಕೂಟರ್ ನಲ್ಲಿ ಕುಂಬ್ರ ಪೆಟ್ರೋಲ್ ಬಂಕ್ ಗೆ ಬರುತ್ತಿದ್ದ ವೇಳೆ ಏಕಾ ಏಕಿ ಕಾಡು ಹಂದಿಯೊಂದು ಧನುಷ್ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ದಾಳಿ ನಡೆಸಿದೆ. ಈ ವೇಳೆ ನಿಯಂತ್ರಣ ತಪ್ಪಿ ಕೇಳಗೆ ಬಿದ್ದ ಧನುಷ್ ಅವರ ಮೇಲೆ ಎರಗಿ ಅವರ ಬಲ ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದಲ್ಲದೆ ಇತರ ದೇಹದ ಭಾಗಗಳಿಗೆ ಗಾಯಗೊಳಿಸಿದೆ. ಗಾಯಾಳುವನ್ನು 108 ಆ್ಯಂಬುಲೆನ್ಸ್ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!