ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್‌ ಡಿಕ್ಕಿಯಾಗಿ ಮಹಿಳೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ವೊಂದು ಲಾರಿಗೆ  ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಬಳೆಕಟ್ಟೆ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಾವೇರಿಯ ಶಿವಬಸವ (50) ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆ ಖಾಸಗಿ ಅಂಬುಲೆನ್ಸ್‌ನಲ್ಲಿ ಶಿವಬಸವ ಅವರ ಮೃತದೇಹವನ್ನು ಹಾವೇರಿಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಬಳೆಕಟ್ಟೆ ಬಳಿ ಅಪಘಾತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!