October 23, 2026
Friday, October 23, 2026
spot_img

ಸ್ಟಿಂಗ್‌ ಆಪರೇಷನ್‌ನಲ್ಲಿ ಕಾಂಗ್ರೆಸ್ ಪಕ್ಷದ ಮಹಿಳೆಯೊಬ್ಬರು ಇದ್ದಾರೆ: ಬಾಂಬ್‌ ಸಿಡಿಸಿದ ಯತೀಂದ್ರ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸ್ಟಿಂಗ್‌ ಆಪರೇಷನ್‌ ವಿಚಾರ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ಸಚಿವ ಯತೀಂದ್ರ ಸಿದ್ದರಾಮಯ್ಯ ಈ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಬ್ಲಾಕ್‌ಮೇಲ್‌ ಮಾಡುವ ಯತ್ನ ನಡೆದಿದೆ. ಈ ಆಪರೇಷನ್‌ನಲ್ಲಿ ನಮ್ಮ ಪಕ್ಷದ ಮಹಿಳೆಯೊಬ್ಬರು ಇದ್ದಾರೆ ಎಂದು ಹೇಳಿದ್ದಾರೆ.

ಸ್ಟಿಂಗ್ ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪತ್ರಕರ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಯಾರೇ ಇದ್ದರೂ ಅರೆಸ್ಟ್ ಮಾಡಲು ತಂದೆ ಹೇಳಿದ್ದಾರೆ. ನಮ್ಮ ಸರ್ಕಾರದ ತನಿಖೆ ಮೇಲೆ ನಂಬಿಕೆ ಇದೆ. ತನಿಖೆ ಸರಿಯಾಗಿ ನಡೆಯುತ್ತಿದೆ. ಅಕಸ್ಮಾತ್ ತನಿಖೆ ಸರಿಯಾಗಿ ನಡೆಯಲಿಲ್ಲ ಅಂದ್ರೆ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ತಣ್ಣಗಿದ್ದ ವಾತಾವರಣವನ್ನು ಕದಡಿ ಸಿದ್ದರಾಮಯ್ಯ ಅವರ ಹೆಸರನ್ನು ಹಾಳುಮಾಡಲಾಗಿದೆ. ಅವರ ಲೆಗಸಿ ಹಾಳು ಮಾಡುವ ಯತ್ನ ಇದಾಗಿದೆ. ನಮ್ಮ ತಂದೆ 40 ವರ್ಷಗಳಿಂದ ರಾಜಕೀಯದಲ್ಲಿ ಒಳ್ಳೆಯ ಹೆಸರು ಮಾಡಿದವರು. ಅವರ ಹೆಸರಿಗೆ ಮಸಿ ಬಳಿಯುವ ಯತ್ನ ನಡೆದಿದೆ. ಸ್ಟಿಂಗ್ ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇದ್ದಾರೆ. ಕಾಂಗ್ರೆಸ್‌ನ ಓರ್ವ ಮಹಿಳೆ ಈ ಪ್ರಕರಣದಲ್ಲಿದ್ದಾರೆ ಎಂದು ಹೇಳಿದ್ದಾರೆ.

Must Read