ಕತಾರ್ ಫಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮ್‌ನಲ್ಲಿ ಕರ್ನಾಟಕದ ತುಳುನಾಡಿನ ಮಹಿಳೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿ ಎಂಬವರ ಪತ್ನಿ ಪ್ರತಿಭಾ ಎನ್. ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು.

ಏಕೈಕ ಕನ್ನಡತಿ: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ಆಯ್ಕೆಯಾಗುವ ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಪ್ರತಿಭಾ, ಕತಾರಿನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ಕೊರೋನಾ ಸಹಿತ ಇತರ ಸಂದರ್ಭದಲ್ಲಿನ ಇವರ ವಿಶೇಷ ಸೇವೆಯನ್ನು ಗುರುತಿಸಿ ಈಗಾಗಲೇ ಗೌರವಿಸಲಾಗಿತ್ತು.

ಇದೀಗ ಇವರು ಆರೋಗ್ಯ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಯನ್ನು ಪರಿಗಣಿಸಿ ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಆಯ್ಕೆ ಮಾಡಲಾಗಿದೆ. ಈ ಅಪೂರ್ವ ಸೇವೆಗೆ ಆಯ್ಕೆಯಾದ ಪ್ರತಿಭಾ ಅವರಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!