ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃಷ್ಣಾ ಜಿಲ್ಲೆಯ ಪೆನಮಲೂರಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮಹಿಳೆ ಮದ್ಯಪಾನ ಮಾಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆಕೆಯಿಂದ ವಿಜಯವಾಡದಿಂದ ಪೆನಮಲೂರಿಗೆ ಕರೆದೊಯ್ದು ಇಂತಹ ದುಷ್ಕೃತ್ಯ ನಡೆಸಲಾಗಿದೆ.
ಸದ್ಯ ಸಂತ್ರಸ್ತೆ ವಿಜಯವಾಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೋರ್ವ ಆರೋಪಿಗಾಗಿ ಶೋಧ ನಡೆಯುತ್ತಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.