ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವರು ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳವಾರ ಸಂಜೆ ಉಪ್ಪಿನಂಗಡಿಯ ಪೆರಿಯಡ್ಕ ಎಂಬಲ್ಲಿ ನಡೆದಿದೆ.
ಪೆರಿಯಡ್ಕ ನಿವಾಸಿ ಬಾಬು ಅವರ ಪತ್ನಿ ಶಾಲಿನಿ ಎಂಬವರು ಹೆರಿಗೆ ನೋವಿನಿಂದ ಬಳಲುತ್ತಿದ್ದು, ತಕ್ಷಣವೇ ಆಲಂಕಾರು 108 ಆರೋಗ್ಯ ಕವಚ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಶಾಲಿನಿಯವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಟಾಫ್ ನರ್ಸ್ ಚಂದ್ರಶೇಖರ್ ಎಂಬವರು ಸುಲಭ ಹೆರಿಗೆ ಮಾಡಿಸಿದರು ಮತ್ತು ಆಂಬ್ಯುಲೆನ್ಸ್ ಚಾಲಕ ಪುರುಷೋತ್ತಮ ಸಹಕರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!