April 15, 2026
Wednesday, April 15, 2026
spot_img

ರಸ್ತೆ ಬದಿ ನಡೆದುಹೋಗುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾ*ವು

ಹೊಸದಿಗಂತ ವರದಿ ಮಡಿಕೇರಿ:

ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿಗೆ ಸಿಲುಕಿ ಸಾವಿಗೀಡಾದ ಘಟನೆ ಕುಶಾಲನಗರ ತಾಲೂಕಿನ ತ್ಯಾಗತ್ತೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ, ಬಾಳೆಗುಂಡಿ ಗಿರಿಜನ ಹಾಡಿಯ ನಿವಾಸಿ ಜಲಜಾಕ್ಷಿ (53) ಮೃತಪಟ್ಟವರು.
ಸೋಮವಾರ ಪೂರ್ವಾಹ್ನ ರಸ್ತೆ ಬದಿ ನಡೆದುಹೋಗುತ್ತಿದ್ದ ಸಂದರ್ಭ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಸ್ಥಳದಲ್ಲೇ ಆಕೆ ಸಾವಿಗೀಡಾಗಿರುವುದಾಗಿ ಹೇಳಲಾಗಿದೆ.

ಸ್ಥಳಕ್ಕೆ ಎಸಿಎಫ್ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !