ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮುದ್ದಿನ ಮನೆಯ ಬೆಕ್ಕು ಯಾರನ್ನೂ ಕಚ್ಚೋದಿಲ್ಲ ಎಂದು ಮುದ್ದು ಮಾಡ್ತೀರಾ? ಮನುಷ್ಯರನ್ನೇ ಅರ್ಥ ಮಾಡಿಕೊಳ್ಳೋಕೆ ಆಗೋದಿಲ್ಲ ಇನ್ನು ಪ್ರಾಣಿಗಳನ್ನು ಅರ್ಥ ಮಾಡಿಕೊಳ್ಳೋಕೆ ಸಾಧ್ಯವಾ? ಯಾವ ಸಮಯದಲ್ಲಾದರೂ ಅವು ನಿಮ್ಮ ವಿರುದ್ಧ ಆಗಬಹುದು..ಇದಕ್ಕೆ ತಾಜಾ ಉದಾಹರಣೆ ಇಲ್ಲಿದೆ.
ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ದುರ್ಘಟನೆ ಸಂಭವಿಸಿದೆ. 50 ವರ್ಷ ವಯಸ್ಸಿನ ಗಂಗೀಬಾಯಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
ಬೆಕ್ಕು ಎರಡು ತಿಂಗಳ ಹಿಂದೆ ಮಹಿಳೆಗೆ ಕಚ್ಚಿತ್ತು. ಬೆಕ್ಕು ಕಚ್ಚಿದ ಪರಿಣಾಮ ರೇಬಿಸ್ ಕಾಯಿಲೆ ಬಂದಿತ್ತು. ಮಹಿಳೆ ಕಾಲಿಗೆ ಕಚ್ಚಿದ ಕಾರಣ ಐದು ಇಂಜೆಕ್ಷನ್ ತೆಗೆದುಕೊಳ್ಳಬೇಕಿತ್ತು. ಆದರೆ ಒಂದು ಇಂಜೆಕ್ಷನ್ ಮಾತ್ರ ಪಡೆದಿದ್ದರು. ಸ್ವಲ್ಪ ಅರಾಮಾಯ್ತು ಎನಿಸಿದ್ದಷ್ಟೇ ಮತ್ತೆ ನಾಲ್ಕು ಇಂಜೆಕ್ಷನ್ ಹಾಕಿಸಿಕೊಳ್ಳಲಿಲ್ಲ.
ಹುಷಾರಾದ ಬಳಿಕ ಮಹಿಳೆ ನಾಟಿ ಮಾಡಲು ಹೊರಟಿದ್ದಾರೆ. ನೀರಿಗೆ ಇಳಿದು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಆದರೆ ರೇಬಿಸ್ನಿಂದಾಗಿ ಅನಾರೋಗ್ಯ ಕಾಡಿದ ಪರಿಣಾಮ ಗಂಗೀಬಾಯಿ ಸಾವನ್ನಪ್ಪಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿ ಬೆಕ್ಕು ಕಚ್ಚಿದರೂ ರೇಬಿಸ್ ಹರಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.