ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದ್ದು, ಮಹಿಳೆ ಮೃತಪಟ್ಟಿದ್ದಾರೆ.
ಕಬ್ಬನ್ಪೇಟೆಯ ಪುಷ್ಪಾ ಬೇಕರಿಗೆ ತೆರಳುವ ಸಂದರ್ಭದಲ್ಲಿ ಸುಬ್ಬಯ್ಯ ಸರ್ಕಲ್ ಬಳಿ ರಸ್ತೆ ದಾಟುವಾಗ ಬಸ್ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.