ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನ, ಅಲ್ಲೇ ಇದ್ದ ಡಾಕ್ಟರ್‌ನಿಂದ ಸಿಪಿಆರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನಲ್ಲಿ ಮತದಾನ ಮಾಡಲು ಬಂದಿದ್ದ ಮಹಿಳೆಗೆ ಹೃದಯ ಸ್ತಂಭನವಾಗಿದ್ದು, ಅಲ್ಲೇ ಇದ್ದ ವೈದ್ಯರು ಸಿಪಿಆರ್‌ ಮಾಡಿ ಪ್ರಾಣ ಉಳಿಸಿದ್ದಾರೆ.

ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತದಾನ ಮಾಡಲು ಬಂದದಿದ್ದರು.

ಇದೇ ವೇಳೆ ಮತದಾನ ಮಾಡಲು ಬಂದಿದ್ದ ಮಹಿಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ತಕ್ಷಣ ಅಲ್ಲೇ ಇದ್ದ ವೈದ್ಯರು ಸಿಪಿಆರ್‌ ಮಾಡಿ ಮಹಿಳೆಯ ಜೀವ ಉಳಿಸಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ ಕರೆಸಿ ಆ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಲಾಯ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!