ಒಡಿಶಾ ರೈಲು ದುರಂತದ ಪರಿಹಾರದ ಹಣಕ್ಕಾಗಿ ಸತ್ತ ವ್ಯಕ್ತಿಯನ್ನು ಪತಿ ಎಂದು ಸುಳ್ಳು ಹೇಳಿದ ಮಹಿಳೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಒಡಿಶಾ ರೈಲು ದುರಂತದ ಸರ್ಕಾರದ ಪರಿಹಾರದ ಹಣ (Government Compensation Cash) ಪಡೆಯಲು ಪತಿ ಮೃತಪಟ್ಟಿದ್ದಾನೆ ಎಂದು ಮಹಿಳೆಯೊಬ್ಬಳು ಕತೆಕಟ್ಟಿದ ಪ್ರಕರಣ ಒಡಿಶಾದ (Odisha) ಕಟಕ್‍ನಲ್ಲಿ ನಡೆದಿದೆ.

ಗೀತಾಂಜಲಿ ದತ್ತಾ ಎಂಬಾಕೆ ರೈಲು ಅಪಘಾತದಲ್ಲಿ ತನ್ನ ಪತಿ ಬಿಜಯ್ ದತ್ತಾ ಸಾವನ್ನಪ್ಪಿದ್ದಾನೆ ಎಂದು ಹೇಳಿಕೊಂಡಿದ್ದಳು. ಅಲ್ಲದೆ ಮೃತದೇಹವೊಂದನ್ನು ತನ್ನ ಗಂಡನದ್ದೇ ಎಂದು ಗುರುತಿಸಿದ್ದಳು. ಆದರೆ ದಾಖಲೆಗಳ ಪರಿಶೀಲನೆಯ ನಂತರ ಆಕೆ ಹೇಳುತ್ತಿರುವುದು ಸುಳ್ಳು ಎಂದು ತಿಳಿದುಬಂದಿದೆ. ಬಳಿಕ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದರು.
ಬಳಿಕ ತನ್ನ ಪತ್ನಿಯ ವಿರುದ್ಧ ಪತಿ ಬಹನಾಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಅಲ್ಲದೇ ಪರಿಹಾರದ ಹಣ ಪಡೆಯಲು ಈ ರೀತಿ ಸಂಚು ರೂಪಿಸಿದ್ದಾಳೆ ಎಂದು ಆರೋಪಿಸಿದ್ದಾನೆ. ಸಾರ್ವಜನಿಕರ ಹಣವನ್ನು ದೋಚಲು ಯತ್ನಿಸಿದ ಗೀತಾಂಜಲಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪತಿ ಒತ್ತಾಯಿಸಿದ್ದಾನೆ. ಈಗ ಬಂಧನದ ಭೀತಿಯಿಂದ ಮಹಿಳೆ ತಲೆಮರೆಸಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲು (Coromandel Express) ಜೂನ್ 2ರ ಸಂಜೆ ಸರಕುಗಳ ರೈಲಿಗೆ ಡಿಕ್ಕಿ ಹೊಡೆದು ಅದರ ಹೆಚ್ಚಿನ ಕೋಚ್‍ಗಳು ಹಳಿತಪ್ಪಿದ್ದವು. ಈ ಅಪಘಾತದಲ್ಲಿ ಸುಮಾರು 276 ಜನರು ಸಾವನ್ನಪ್ಪಿದ್ದರು. ಅಲ್ಲದೇ 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಒಡಿಶಾ ಸಿಎಂ ನವೀನ್ ಪಟ್ನಾಯಕ್ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಪ್ರಧಾನಿ ನರೇಂದ್ರ ಮೋದಿಯವರು (Narendra Modi) 2 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಅಲ್ಲದೆ ಅಪಘಾತದ ಸಂತ್ರಸ್ಥರ ಕುಟುಂಬಗಳಿಗೆ ರೈಲ್ವೆ ಸಚಿವಾಲಯ 10 ಲಕ್ಷ ರೂ. ಪರಿಹಾರ ಘೋಷಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!