ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರದಲ್ಲಿ ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿ ಇಬ್ಬರು ಮುಸುಕುಧಾರಿಗಳು ಮಾಂಗಲ್ಯ ಸರ ಹಾಗೂ ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿರುದ್ದಾರೆ.
ವಿಜಯಪುರ ನಗರದ ದಿವಟಗೇರಿ ಗಲ್ಲಿಯಲ್ಲಿ ದುರ್ಘಟನೆ ಸಂಭವಿಸಿದೆ. ಕಲಾವತಿ ಗಾಯಕವಾಡ್(45) ಹಲ್ಲೆಗೊಳಗಾದ ಮಹಿಳೆ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಕಲಾವತಿ ಗಾಯ್ಕವಾಡ್ ಹಾಲು ತರಲು ಅಂಗಡಿಗೆ ತೆರಳುತ್ತಿದ್ದರು. ಈ ವೇಳೆ ಮಹಿಳೆ ಮೇಲೆ ಹಲ್ಲೆ ಮಾಡಿ ಇಬ್ಬರು ಮುಸುಕುಧಾರಿಗಳು ಮಾಂಗಲ್ಯ ಸರ ಹಾಗೂ ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ಕಿವಿಯೋಲೆ ಕಿತ್ತುಕೊಳ್ಳುವ ವೇಳೆ ಕಲಾವತಿ ಅವರ ಕಿವಿ ಕತ್ತರಿಸಿದೆ. ಮುಖ, ಬಾಯಿಗೂ ಹಲ್ಲೆ ಮಾಡಿರುವ ಕಳ್ಳರು 10 ಗ್ರಾಂ ಚಿನ್ನದ ಮಾಂಗಲ್ಯ ಸರ, 1 ಗ್ರಾಂ ಚಿನ್ನದ ಕಿವಿಯೋಲೆ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಗಾಂಜಾ ಮತ್ತಿನಲ್ಲಿ ಇಬ್ಬರು ಯುವಕರು ಮುಖಕ್ಕೆ ಮುಖವಾಡ ಹಾಕಿಕೊಂಡು ಕಲಾವತಿ ಅವರ ಮೇಲೆ ಅಮಾನುಷ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಕಲಾವತಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕತ್ತರಿಸಿದ ಕಿವಿಗೆ ಸ್ಟಿಚ್ ಹಾಕಿ ಚಿಕಿತ್ಸೆ ನೀಡಲಾಗಿದೆ.

