ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ದೌರ್ಜನ್ಯ ಆರೋಪದ ವಿಚಾರವಾಗಿ ದಾಖಲಾಗಿರುವ ಎಫ್ಐಆರ್ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ, ತಾಯಿ ಮತ್ತು ಮಗಳು ನ್ಯಾಯ ಕೇಳಲು ನನ್ನ ಬಳಿ ಹಲವು ಬಾರಿ ಬಂದಿದ್ದರು.
ನನ್ನ ಬಳಿ ಬಂದು ಅನ್ಯಾಯವಾಗಿದೆ ಎಂದರು. ನ್ಯಾಯ ಕೊಡಿಸುವಂತೆ ಆಗ್ರಹಿಸಿದರು. ಆಗ ಅವರು ನನ್ನ ವಿರುದ್ಧ ಏನೇನೋ ಮಾತನಾಡಲು ಶುರು ಮಾಡಿದರು. ಬಳಿಕ ಅವರನ್ನ ಕಮಿಷನರ್ ಬಳಿ ಕಳಿಸಿಕೊಟ್ಟೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಸಹಾಯ ಮಾಡಿದರೆ ಇದೀಗ ನನ್ನ ವಿರುದ್ಧವೇ ಆರೋಪ ಮಾಡಲಾಗಿದೆ. ಯಾರೋ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಅದರ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.