ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ, ಚಾಲಕನೊಬ್ಬ ರಸ್ತೆ ದಾಟಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯ ಮೇಲೆ ಕಾರು ಚಲಾಯಿಸಿ ಅವನನ್ನು ಸುಮಾರು 10 ಮೀಟರ್ ಎಳೆದೊಯ್ದಿರುವ ಘಟನೆ ನಡೆದಿದೆ.
ಕನ್ನಾಟ್ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ನಂತರ ಡಿಕ್ಕಿ ಹೊಡೆದ ವ್ಯಕ್ತಿಯನ್ನು ಸುಮಾರು 10 ಮೀಟರ್ ವರೆಗೆ ಎಳೆದೊಯ್ದರೂ ಚಾಲಕ ಕಾರು ನಿಲ್ಲಿಸದೆ ಓಡಿ ಹೋಗಿದ್ದಾನೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲೇಖ್‌ರಾಜ್ (45) ಮೃತಪಟ್ಟವರು. ಈ ಘಟನೆಯ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆ ನಡೆದ ಕೆಲವೇ ಗಂಟೆಗಳ ನಂತರ ಪೊಲೀಸರು ಕಾರು ಚಾಲಕ ಶಿವಂ ದುಬಿ (28)ನನ್ನು ಬಂಧಿಸಿದ್ದಾರೆ. ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಚಾಲಕನನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.