August 24, 2026
Monday, August 24, 2026
spot_img

ಅಪಘಾತದಲ್ಲಿ ಕಟ್‌ ಆದ ಅಂಗೈಯನ್ನು ಪ್ಲಾಸ್ಟಿಕ್‌ ಕವರ್‌ಗೆ ಹಾಕಿಕೊಂಡು ಆಸ್ಪತ್ರೆಗೆ ಬಂದ ಯುವಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಪಘಾತದಲ್ಲಿ ಕತ್ತರಿಸಿಹೋಗಿದ್ದ ಅಂಗೈಯನ್ನು ಹಿಡಿದುಕೊಂಡು ಯುವಕನೊಬ್ಬ ಆಸ್ಪತ್ರೆಗೆ ಬಂದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಅಪಘಾತವೊಂದರಲ್ಲಿ ಯುವಕ ರೋಹನ್‌ನ ಕೈ ಮಣಿಕಟ್ಟಿನ ಭಾಗದಲ್ಲಿ ಸಂಪೂರ್ಣವಾಗಿ ಕತ್ತರಿಸಿಹೋಗಿದೆ. ಆದರೂ ಧೃತಿಗೆಡದ ರೋಹನ್‌ ಕತ್ತರಿಸಿ ಹೋಗಿರುವ ಕೈಯನ್ನು ಹಿಡಿದುಕೊಂಡು ಆಸ್ಪತ್ರೆಗೆ ಬಂದಿದ್ದಾನೆ.

ಸ್ನೇಹಿತರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರು ಪಲ್ಟಿಯಾಗಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಸ್ನೇಹಿತರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ.

ರೋಹನ್‌ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಭೀಕರ ಅಪಘಾತ ಸಂಭವಿಸಿದೆ. ಕಾರು ಪಲ್ಟಿಯಾದ ಪರಿಣಾಮ ರೋಹನ್ ಅವರ ಒಂದು ಕೈ ಮಣಿಕಟ್ಟಿನ ಭಾಗದಲ್ಲಿ ಸಂಪೂರ್ಣವಾಗಿ ಕಟ್ ಆಗಿದೆ. ತುಂಡಾಗಿದ್ದ ಎಡಗೈಯನ್ನು ಪ್ಲಾಸ್ಟಿಕ್ ಕವರ್ ಗೆ ಹಾಕಿಕೊಂಡು ಬಂದಿದ್ದಾನೆ. ಜಮಖಂಡಿಯಿಂದ ಸಾವಳಗಿಗೆ ಹೋಗುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.. ವೈದ್ಯರು ಗಾಯಾಳುವಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದು, ಕತ್ತರಿಸಿದ ಕೈಯನ್ನು ಮರುಜೋಡಿಸುವ ಸಾಧ್ಯತೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !