ಮಿಸ್ಸಿಂಗ್‌ ಕೇಸ್‌ ಪೊಲೀಸ್‌ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಮೌನೇಶ್ ಅಬ್ಬಿಹಾಳ (30) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಮೃತನ ಸೋದರ ಮಾವ ಬಸವರಾಜ್ ಕಾಣೆಯಾಗಿದ್ದ. ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಮೌನೇಶ್‌ನನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದರು.

ಗುರುವಾರ ಸಹ ಮತ್ತೆ ವಿಚಾರಣೆಗೆ ಬರುವಂತೆ ಹೇಳಿದ್ದರು. ಆದರೆ ವಿಚಾರಣೆಗೆ ಹೆದರಿ ಯುವಕ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!