ಸಿಲಿಕಾನ್ ಸಿಟಿಯಲ್ಲಿ ಪಿಜಿ ಕಟ್ಟಡದಿಂದ ಹಾರಿ ಯುವಕ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಪಿಜಿ ಕಟ್ಟಡದ ಮೇಲಿನಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ.

ಮೃತನನ್ನು ಕಲಬುರ್ಗಿ ಮೂಲದ 28 ವರ್ಷದ ಯುವಕ ಎಂದು ಹೇಳಲಾಗುತ್ತಿದ್ದು, ಪಿಜಿ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಆತ ಕೆಲಸ ಹುಡುಕಿಕೊಂಡು ಬಂದಿದ್ದ . ಆದರೆ ಆತನಿಗೆ ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದ್ದು, ಘಟನೆ ಕುರಿತಂತೆ ವೈಟ್ ಫೀಲ್ಡ್ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!