ಹೊಸದಿಗಂತ ವರದಿ,ಮಂಡ್ಯ :
ಪ್ರೀತಿಸುತ್ತಿದ್ದ ಅಪ್ರಾಪ್ತೆ ಬಾಲಕಿ ಮನೆ ಮುಂದೆಯೇ ಯುವಕನೋರ್ವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗಮಂಗಲ ತಾಲೂಕಿನ ಕಾಂತಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಳೆನಹಳ್ಳಿ ಗ್ರಾಮದಲ್ಲಿ ನಡೆದಿದೆ .
ಗ್ರಾಮದ ರಾಮಚಂದ್ರು (21) ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕ. ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದಾನೆ.
ಒಂದು ವರ್ಷದ ಹಿಂದೆ ಅಪ್ರಾಪ್ತೆಯನ್ನು ಕರೆದೊಯ್ದ ಹಿನ್ನೆಲೆಯಲ್ಲಿ ರಾಮಚಂದ್ರು ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿತ್ತು. ಫೋಕ್ಸೋ ಕೇಸ್‌ನಲ್ಲಿ 6 ತಿಂಗಳು ಜೈಲುವಾಸ ಅನುಭವಿಸಿದ್ದ. ಬಳಿಕ 2 ಕುಟುಂಬಗಳ ರಾಜಿ ಸಂಧಾನ ಬಳಿಕ ಕೇಸ್ ವಾಪಾಸ್ ಪಡೆಯಲಾಗಿತ್ತು. ನಂತರ ಅಪ್ರಾಪ್ತ ಪ್ರಿಯತಮೆ ರಾಮಚಂದ್ರನ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಹೀಗಾಗಿ ಮನನೊಂದ ರಾಮಚಂದ್ರ ನಿನ್ನೆ ಆಕೆಯ ಮುನೆಯ ಮುಂದೆ ಕಲ್ಲುಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಪೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.