ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ಪೂಜಾರಹಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಚಾಲೆಂಜ್ ಗೆಲ್ಲೋದಕ್ಕಾಗಿ ಮದ್ಯ ಸೇವಿಸಿ ಮೃತಪಟ್ಟಿದ್ದಾನೆ.
ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಕಾರ್ತಿಕ್ (21) ಜೂಜಾಟದಲ್ಲಿ ಮೃತಪಟ್ಟ ಯುವಕ.
ಐದು ಬಾಟಲ್ ಮದ್ಯಕ್ಕೆ ಒಂದೇ ಒಂದು ಹನಿ ನೀರು ಬೆರೆಸದೇ ಕಚ್ಚಾ ಕುಡಿಯುವುದಾಗಿ ಕಾರ್ತಿಕ್ 10 ಸಾವಿರ ರೂ. ಹಣಕ್ಕೆ ಬಾಜಿ ಕಟ್ಟಿದ್ದಾನೆ. ಅದರಂತೆ ಸ್ವಲ್ಪೂ ನೀರು ಹಾಕಿಕೊಳ್ಳದೇ ಬರೋಬ್ಬರಿ ಐದು ಬಾಟಲಿ ಮದ್ಯವನ್ನು ಸೇವಿಸಿದ್ದಾನೆ. ಆದ್ರೆ, ಮದ್ಯ ದೇಹದೊಳಗೆ ಸೇರಿಕೊಳ್ಳುತ್ತಿದ್ದಂತೆಯೇ ಕಾರ್ತಿಕ್ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾನೆ.
ಇದೇ ಪೂಜಾರಹಳ್ಳಿ ಗ್ರಾಮದ ವೆಂಕಟರಡ್ಡಿ, ಸುಬ್ರಮಣಿ ಮತ್ತು ಇತರೆ ಮೂವರೊಂದಿಗೆ ಬೆಟ್ಟಿಂಗ್ ಕಟ್ಟಿದ್ದ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ ಕಟ್ಟಿದ್ದ ಎನ್ನಲಾಗಿದೆ. ನಂತರ ಆರೋಗ್ಯದಲ್ಲಿ ಏರುಪೇರು ಆಗುತ್ತಿದ್ದಂತೆಯೇ ಸ್ನೇಹಿತರ ಬಳಿ ನನ್ನನ್ನು ಉಳಿಸಿ ಎಂದು ಕಣ್ಣೀರಿಟ್ಟಿದ್ದಾರೆ.
ತಕ್ಷಣವೃ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಕಾರ್ತಿಕ್ ದೇಹ ಚಿಕಿತ್ಸೆಗೂ ಸ್ಪಂದಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.