ಹೊಸದಿಗಂತ ವರದಿ, ಮೈಸೂರು :
ಕಬಿನಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ
ಸರಗೂರು ತಾಲ್ಲೂಕಿನ ತೆರಣಿಮುಂಟಿ ಗ್ರಾಮದ ಬಳಿಯ ಕಬಿನಿ ಹಿನ್ನೀರಿನಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ನಿವಾಸಿ ಹರ್ಷವರ್ಧನ (25) ಮೃತ ಯುವಕ. ಈತ ಕಬಿನಿ ಹಿನ್ನೀರಿನಲ್ಲಿ ಮೂವರು ಸ್ನೇಹಿತರ ಜತೆ ಈಜಲು ತೆರಳಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮೃತನ ತಂದೆ ಹರ್ಷವರ್ಧನ್‌ನ ಮೂವರು ಸ್ನೇಹಿತರ ವಿರುದ್ಧ ಸರಗೂರು ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.