ಹೊಸದಿಗಂತ ವರದಿ, ಹಾಸನ :
ಸಕಲೇಶಪುರ ತಾಲ್ಲೂಕಿನ ಗವಿಬೆಟ್ಟದಲ್ಲಿ ಭಾನುವಾರ ಸಂಜೆ ರೀಲ್ಸ್ ಮಾಡಲು ಹೋಗಿದ್ದ ಯುವಕ ಆಯತಪ್ಪಿ ಬೆಟ್ಟದಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾನೆ.
ಗಾಯಗೊಂಡ ಯುವಕನನ್ನು ರಾಶಿದ್ (18) ಎಂದು ಗುರುತಿಸಲಾಗಿದೆ. ಶನಿವಾರಸಂತೆಯಿಂದ ತನ್ನ ಇಬ್ಬರು ಸ್ನೇಹಿತರ ಜೊತೆ ಗವಿಬೆಟ್ಟಕ್ಕೆ ಬಂದಿದ್ದ ರಾಶಿದ್, ಬೆಟ್ಟದ ತುದಿಯಲ್ಲಿ ನಿಂತು ರೀಲ್ಸ್ ಮಾಡುವ ವೇಳೆ ಆಯತಪ್ಪಿ ಬೆಟ್ಟದ ಮೇಲಿಂದ ಸುಮಾರು ನೂರು ಅಡಿ ಆಳಕ್ಕೆ ಬಿದ್ದಿದ್ದಾನೆ. ಅಪಘಾತದ ಬಳಿಕ ತಕ್ಷಣವೇ ಸ್ಥಳೀಯರು ಹಾಗೂ ಸ್ನೇಹಿತರು ಸಹಾಯಕ್ಕೆ ಧಾವಿಸಿ ರಕ್ಷಿಸಿ ಮೇಲೆ ಕರೆ ತಂದು ಶನಿವಾರಸಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ರವಾನಿಸಿದ್ದಾರೆ. ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
ಗವಿಬೆಟ್ಟವು ತನ್ನ ಸೌಂದರ್ಯ ಹಾಗೂ ಪ್ರವಾಸಿಗರ ಆಕರ್ಷಣೆಗೆ ಪ್ರಸಿದ್ಧವಾಗಿದೆ. ಆದರೆ, ಫೋಟೋ ಮತ್ತು ವೀಡಿಯೋ ಮಾಡುವ ಉದ್ದೇಶದಿಂದ ಅತಿಯಾದ ಸಾಹಸಕ್ಕೆ ಮುಂದಾಗುವುದರಿಂದ ಇಂತಹ ದುರ್ಘಟನೆಗಳು ನಡೆಯುತ್ತಿವೆ.