March 15, 2026
Sunday, March 15, 2026
spot_img

ಉಡುಪಿಯ ಯುವಕನಿಗೆ ಒಲಿದ ಅದೃಷ್ಟ: ಅಬುದಾಬಿಯ ಲಕ್ಕಿ ಡ್ರಾನಲ್ಲಿ ಸಿಕ್ಕಿತು 49 ಕೋಟಿ!.

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ ಓಮನ್​​​ನಲ್ಲಿ ಚಿಲ್ಲರೆ ವ್ಯಾಪಾರದ ಸೇಲ್ಸ್​​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಮೂಲದ ಶಂತನು ಶೆಟ್ಟಿಗಾರ್‌ 49 ಕೋಟಿ ( (20 ಮಿಲಿಯನ್‌ ದಿರಮ್‌ ) ರು. ಮೊತ್ತದ ಲಾಟರಿ ಗೆದ್ದಿದ್ದಾರೆ.

ಉಡುಪಿಯ ಉದ್ಯಾವರ ಮೂಲದ 33 ವರ್ಷದ ಶಂತನು ಓಮನ್​​​ನಲ್ಲಿ ರಿಟೇಲ್‌ ವಲಯದ ಉದ್ಯೋಗದಲ್ಲಿದ್ದು, ಜನವರಿ 20ರಂದು ಬಿಗ್‌ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಈ ಲಾಟರಿ ಫೆ.3ರಂದು ಬಿಗ್‌ ಟಿಕೆಟ್ ಡ್ರಾ ಆಗಿದ್ದು, ಶಂತನು ಅವರಿಗೆ ಅದೃಷ್ಟ ಖುಲಾಯಿಸಿದೆ.

ತನ್ನ ಸ್ನೇಹಿತರೊಬ್ಬರೊಂದಿಗೆ ಸೇರಿಕೊಂಡು ಶಂತನು ಜಂಟಿಯಾಗಿ ಟಿಕೆಟ್ ಖರೀದಿಸಿದ್ದರು. ಹೀಗಾಗಿ ಒಟ್ಟು 49 ಕೋಟಿ ರೂಪಾಯಿನಲ್ಲಿ ಇಬ್ಬರೂ ತಲಾ 24.5 ಕೋಟಿ ರೂ. ಹಂಚಿಕೊಳ್ಳಲು ನಿರ್ಧರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !