ಗೂಳಿ ತಿವಿತಕ್ಕೆ ಪ್ರಾಣ ಕಳೆದುಕೊಂಡ ಯುವಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಲವೊಂದು ಹಳ್ಳಿಗಳಲ್ಲಿ ಈಗಲೂ ಕೂಡ ಹೋರಿ ಬೆದರಿಸುವ ಹಬ್ಬವನ್ನು ಆಚರಣೆ ಮಾಡುತ್ತಾರೆ. ಆದರೆ ಇದರಿಂದ ಕೆಲ ತೊಂದರೆ ಕೂಡ ಸಂಭವಿಸಬಹುದು. ಎಷ್ಟು ಜನರು ಇದರಿಂದ ತಮ್ಮ ಪ್ರಾಣವನ್ನ ಕೂಡ ಕಳೆದುಕೊಳ್ಳುವ ಪರಿಸ್ಥಿತಿ ಬರಬಹುದು.

ಈಗ ಇಂಥದ್ದೆ ಒಂದು ಘಟನೆ ನಡೆದಿದೆ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಗೂಳಿ ತಿವಿತಕ್ಕೆ ಯುವಕನೋರ್ವ ತನ್ನ ಪ್ರಾಣವನ್ನ ಕಳೆದುಕೊಂಡಿದ್ದಾನೆ.

ಭಾನುವಾರ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಯನ್ನು ನೋಡಲು ಹೋಗಿದ್ದ ಯುವಕನಿಗೆ ಗೂಳಿ ತಿವಿದು ಗಂಭೀರ ಗಾಯಗೊಂಡಿದ್ದ ಪುನೀತ್ ಆಚಾರ್ (19) ಎಂಬ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ. ಇನ್ನು ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!