ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಜಬಲ್‌ಪುರದ ದೇವಸ್ಥಾನವೊಂದರಲ್ಲಿ ಯುವಕನೊಬ್ಬ ಭಗವಾನ್ ಕಾಲಭೈರವನ ಪ್ರತಿಮೆಯ ಬಾಯಿಗೆ ಸಿಗರೇಟ್ ಇಟ್ಟಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ.
ಜಬಲ್ಪುರದ ಗ್ವಾರಿಘಾಟ್‌ನಲ್ಲಿರುವ ಶ್ರೀ ಕಾಲಭೈರವ ಮಂದಿರದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಆರೋಪಿ ಯುವಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.
@SumitKumar78276 ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ. ಯುವಕನ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ತನಿಖೆ ಆರಂಭಿಸಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಜಬಲ್‌ಪುರ ಆನಂದ ಕಲಾದಗಿ ಫ್ರೀ ಪ್ರೆಸ್‌ಗೆ ತಿಳಿಸಿದ್ದಾರೆ.
🚨 A video showing a devotee offering a cigarette to the Kal Bhairav idol at Shri Kal Bhairav Temple in Jabalpur has gone viral. Authorities have taken action and initiated an investigation.#Jabalpur #KalBhairav #ViralVideos #PoliceInvestigation #ReligiousRespect #SocialMedia pic.twitter.com/AnxRcYAKlk
— Sumit Kumar (@SumitKumar78276) November 29, 2024