ಹೊಸದಿಗಂತ ವರದಿ,ಮುಂಡಗೋಡ :
ತಾಲೂಕಿನ ಇಂದೂರ ಗ್ರಾಮದಲ್ಲಿ ಯುವಕನೊಬ್ಬ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದೂರ ಗ್ರಾಮದಲ್ಲಿ ಶುಕ್ರವಾರ ಸಾಯಂಕಾಲ ನಡೆದಿದೆ.
ಇಂದೂರಿನ ಸುರೇಶ ಸ ಮುಗಳಿಕಟ್ಟಿ (26) ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ 108 ಸಿಬ್ಬಂದಿಗಳು ಪ್ರಾಥಮಿಕ ಚಿಕಿತ್ಸೆ ನೀಡಿ ಮುಂಡಗೋಡ ಸರಕಾರಿ ತಾಲ್ಲೂಕು ಆಸ್ಪತ್ರೆ ಗೆ ದಾಖಲಿಸಿದ್ದಾರೆ. ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ಪರಿಣಾಮ ಯುವಕನ ಮೈ ಎಲ್ಲಾ ಸುಟ್ಟ ಗಾಯಗಳಾಗಿವೆ.
ಆತ್ಮಹತ್ಯೆ ಯತ್ನಕ್ಕೆ ಕಾರಣ ಏನೆಂದು ತಿಳಿದುಬಂದಿಲ್ಲ.