ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಯ ಸಿಗದಿದ್ದಕ್ಕೆ ಮನನೊಂದ ಯುವಕ ಕೋರ್ಟ್ ಆವರಣದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಮಲ್ಲಿಕಾರ್ಜುನ ವಿಷ ಸೇವಿಸಿದ ಯುವಕ. ವಿಷ ಸೇವನೆ ಬಳಿಕ ಅಸ್ವಸ್ಥಗೊಂಡ ಯುವಕನನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಡೂರು ತಾಲೂಕಿನ ದೇವರಕಾರೇಹಳ್ಳಿಯ ನಿವಾಸಿಯಾಗಿರುವ ಮಲ್ಲಿಕಾರ್ಜುನ ಜಮೀನು ವಿವಾದ ಸಂಬಂಧ ನ್ಯಾಯಾಲಯದ ಮೆಟ್ಟಿಲೇರಿದ್ದರು.
ನ್ಯಾಯಾಲಯದಲ್ಲಿ ತಮ್ಮ ಪರವಾಗಿ ತೀರ್ಪು ಬಾರದ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ವಿಡಿಯೋ ರೆಕಾರ್ಡ್ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.