ಹೊಸದಿಗಂತ ವರದಿ, ವಿಜಯಪುರ:
ಹಾಡಹಗಲೇ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಮ್ಮಟ ನಗರದಲ್ಲಿ ಸೋಮವಾರ ನಡೆದಿದೆ.
ಇಲ್ಲಿನ ಸುಶೀಲ ತುಳಜಾರಾಮ ಕಾಳೆ (39) ಮೃತಪಟ್ಟ ಯುವಕ.
ಸುಶೀಲ ಕಾಳೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಇಂದು ಮಧ್ಯಾಹ್ನ ನಗರದ ಅಮರವರ್ಷಿಣಿ ಸಹಕಾರಿ ಬ್ಯಾಂಕ್ ಗೆ ಕೆಲಸದ ನಿಮಿತ್ತ ತೆರಳಿದ ವೇಳೆ, ಮೂರ್ನಾಲ್ಕು ಜನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದಕ್ಕೆ ತೀವ್ರ ಅಸ್ವಸ್ಥಗೊಂಡಿದ್ದ, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಅಸುನೀಗಿದ್ದಾನೆ.
ಇಲ್ಲಿನ ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.