Monday, September 26, 2022

Latest Posts

ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನ ಹತ್ಯೆ

ಹೊಸದಿಗಂತ ವರದಿ,ವಿಜಯಪುರ:

ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಇಲ್ಲಿನ ಯೋಗಾಪುರ ಕಾಲೋನಿಯ ಸುನೀಲ ರಜಪೂತ (24) ಮೃತಪಟ್ಟ ಯುವಕ.
ಕಳೆದ ಎರಡು ದಿನಗಳ ಹಿಂದೆ ಸುನೀಲ ರಜಪೂತ ಈತನನ್ನು ಇಲ್ಲಿನ ಮನಗೂಳಿ ಬೈಪಾಸ್ ಬಳಿ, ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದರು. ಗಂಭೀರ ಗಾಯಗೊಂಡಿದ್ದ ಸುನೀಲ ಚಿಕಿತ್ಸೆ ಫಲಿಸದೇ ಜಿಲ್ಲಾಸ್ಪತ್ರೆಯಲ್ಲಿ ಅಸುನೀಗಿದ್ದಾನೆ.ಈ ಘಟನೆಯಲ್ಲಿ ಗಾಯಗೊಂಡಿದ್ದ ಇನ್ನೊಬ್ಬ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!