ಹೊಸದಿಗಂತ ವರದಿ ಹುಬ್ಬಳ್ಳಿ:
ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವವನ್ನು ಬೆತ್ತಲ ಮಾಡಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಹೊಸುರು ನಿವಾಸಿ ಸಂದೀಪ ಸೊಳಂಕಿ ಹಲ್ಲೆಗೊಳಗಾದ ವ್ಯಕ್ತಿ. ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೆಟ್ಲ್‌ಮೆಂಟ್ ಏರಿಯಾದ ಗಂಗಾಧರ ನಗರದ ಪ್ರಜ್ವಲ್ ಗಾಯಕವಾಡ, ಗಬ್ಬೂರಿನ ಮಂಜುನಾಥ್ ಅಂಗಡಿ, ಸೆಟ್ಲಮೆಂಟ್ ಮಂಜುನಾಥ್ ಎಂಬುವರ ವಿಡಿಯೋದಲ್ಲಿ ಇರುವವರು ಎಂದು ತಿಳಿದುಬಂದಿದೆ.
ವಿಡಿಯೋದಲ್ಲಿ ಮರಾಠಿ ಹಾಗೂ ಕನ್ನಡದಲ್ಲಿ ಮಾತನಾಡಿದ್ದಾರೆ. ಇಸ್ಟಗ್ರಾಂ ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಂದೇಶ ಹಾಕಿದ್ದರಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಅಳುತ್ತಾ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.