ಹೊಸದಿಗಂತ ಡಿಜಿಟಲ್ ಡೆಸ್ಕ್:
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಬ್ಯಾರೇಜ್‌ನಲ್ಲಿ ಹೋಳಿ ಹಬ್ಬದ ನಂತರ ನದಿಯಲ್ಲಿ ಈಜಲು ಹೋಗಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಯುವರಾಜ ವಿಶ್ವನಾಥ ಕೊಂಪಿ (23) ಮೃತಪಟ್ಟ ಯುವಕ.
ವಿಜಯನಗರ ಜಿಲ್ಲೆ ಹಿರಹಡಗಲಿ ಗ್ರಾಮದ ಯುವರಾಜ ಎಂಬಾತ ಹೋಳಿ ಹಬ್ಬದ ನಂತರ ತನ್ನ ಸ್ನೇಹಿತರೊಂದಿಗೆ ಸ್ನಾನ ಮಾಡಲು ನದಿಗೆ ಬಂದಿದ್ದ.ಶಿಂಗಟಾಲೂರು ಏತ ನೀರಾವರಿಯ ಅಣೆಕಟ್ಟಿನಲ್ಲಿ ಈಜುತ್ತಿದ್ದಾಗ ಮುಳುಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಮೃತದೇಹವನ್ನು ಪತ್ತೆ ಹಚ್ಚಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸ್ ತನಿಖೆ ಮುಂದುವರಿದಿದೆ.