ನಡುರಸ್ತೆಯಲ್ಲಿ ತಲವಾರು ಹಿಡಿದು ತಿರುಗಾಡುತ್ತಾ ಭಯ ಹುಟ್ಟಿಸಿದ ಯುವಕ!!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಲವಾರು ಹಿಡಿದುಕೊಂಡು ರಸ್ತೆಯಲ್ಲಿ ಅಡ್ಡಾಡುವ ಮೂಲಕ ಯುವಕನೋರ್ವ ಸಾರ್ವಜನಿಕರಲ್ಲಿ ಆತಂಕಹುಟ್ಟಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ನಡೆದಿದೆ‌ ಎನ್ನಲಾಗಿದ್ದು, ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ತಲವಾರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕ ತಿಳಿದುಬರಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!