May 31, 2026
Sunday, May 31, 2026
spot_img

ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲು

ಹೊಸದಿಗಂತ ವರದಿ ಮಂಡ್ಯ:

ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೆ.ಆರ್. ಪೇಟೆ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅರುಣ್‌ಕುಮಾರ್ (26) ಎಂಬಾತನೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರ್ದೈವಿಯಾಗಿದ್ದಾನೆ.
ಗ್ರಾಮದ ಬಳಿ ಇರುವ ಲಿಂಗಾಪುರ ಕೆರೆಯಲ್ಲಿ ತಂದೆಯ ಜೊತೆಗೆ ಮೀನು ಹಿಡಿಯಲು ಹೋಗಿದ್ದ ಅರುಣ್‌ಕುಮಾರ್, ವೇಳೆ ಕೆರೆಯ ಕೆಸರು ಗುಂಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾನೆ.

ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನುರಿತ ಈಜುಗಾರರ ಸಹಕಾರದಿಂದ ಕೆರೆಯ ಹೂಳಿನಲ್ಲಿ ಸಿಲುಕಿದ್ದ ಅರಣ್‌ಕುಮಾರ್‌ನ ಶವವನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು. ನಂತರ ಶವವನ್ನು ವಶಕ್ಕೆ ಪಡೆದ ಪೊಲೀಸರು ಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ, ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ನೀಡಲಾಯಿತು.

ಅರುಣ್‌ಕುಮಾರ್‌ನ ತಂದೆ ಸಹ ಮೀನು ಹಿಡಿಯಲು ಹೋಗಿದ್ದು, ಅವರಿಗೆ ಯಾವುದೇ ತೊಂದರೆಯಾಗಿಲ್ಲ. ಕಣ್ಣ ಮುಂದೆಯೇ ಮಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದನ್ನು ಕಂಡು ಬಿಕ್ಕಳಿಸಿದ್ದರು. ಕುಟುಂಬಸರ ಆಕ್ರಂದನ ಮುಗಿಲು ಮುಟ್ಟಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !