Wednesday, November 12, 2025

ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು

ಹೊಸದಿಗಂತ ವರದಿ ಕುಶಾಲನಗರ:

ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹುದುಗೂರು ಬಳಿ ನಡೆದಿದೆ.

ಕೂಡಿಗೆಯ ನಿವಾಸಿ ಬಸವರಾಜು ಎಂಬವರ ಪುತ್ರ ಸಂತೋಷ (28) ಮೃತ ಯುವಕ. ಘಟನೆಯ ಹಿನ್ನೆಲೆಯಲ್ಲಿ ನಾಲೆಯಲ್ಲಿ ನೀರು ಸರಬರಾಜು ಸ್ಥಗಿತಗೊಳಿಸಲಾಗಿದ್ದು,ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

error: Content is protected !!