October 10, 2026
Saturday, October 10, 2026
spot_img

ಕತ್ತು ಕೊ*ಯ್ದ ಸ್ಥಿತಿಯಲ್ಲಿತ್ತು ಯುವಕನ ಶವ: ಪಾರ್ಟಿಗೆ ಹೋದಾಗ ಅಲ್ಲಿ ನಡೆದಿದ್ದಾದ್ರೂ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೆಳೆಯನ ಜೊತೆ ಪಾರ್ಟಿಗೆ ತೆರಳಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸಮೀಪದ ದೊಡ್ಡಕೆರೆ ಏರಿ ಬಳಿ ಬೆಳಕಿಗೆ ಬಂದಿದೆ.

ಮೃತ ಯುವಕನನ್ನು ಮೂಖಹಳ್ಳಿ ಗ್ರಾಮದ ನಿವಾಸಿ ನಂಜುಂಡಸ್ವಾಮಿ (23) ಎಂದು ಗುರುತಿಸಲಾಗಿದೆ. ಕತ್ತು ಕೊಯ್ದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ.

ಪೊಲೀಸ್ ಮಾಹಿತಿ ಪ್ರಕಾರ, ನಂಜುಂಡಸ್ವಾಮಿ ಕೆಲ ದಿನಗಳ ಹಿಂದೆ ಕೆಲಸ ಮುಗಿಸಿ ಮನೆಗೆ ಬಂದಿದ್ದ ವೇಳೆ ಅಜಯ್ ಎಂಬಾತ ಪಾರ್ಟಿಗೆ ಬರುವಂತೆ ಕರೆದುಕೊಂಡು ಹೋಗಿದ್ದಾನೆ ಎಂದು ಹೇಳಲಾಗಿದೆ. ಬಳಿಕ ಏರಿಯ ಸಮೀಪದಲ್ಲಿ ಈ ಘಟನೆ ನಡೆದಿರುವ ಅನುಮಾನ ವ್ಯಕ್ತವಾಗಿದೆ. ಪಾರ್ಟಿಯಲ್ಲಿ ಇನ್ನೂ ಯಾರು ಇದ್ದರು ಅಥವಾ ಇಬ್ಬರೇ ಇದ್ದರೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ:

ಗಾಂಜಾ ಅಥವಾ ಮದ್ಯದ ನಶೆಯಲ್ಲಿ ಈ ಘಟನೆ ನಡೆದಿರಬಹುದು ಎಂಬ ಶಂಕೆಯಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

Must Read