ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………
ಹೊಸ ದಿಗಂತ ವರದಿ, ಅಂಕೋಲಾ:
ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ತೆಂಕಣಕೇರಿ ಗ್ರಾಮದಲ್ಲಿ ನಡೆದಿದೆ.
ಗೌತಮ ಪ್ರಭಾಕರ್ ನಾಯ್ಕ (27) ಎಂಬಾತನೇ ಮೃತ ವ್ಯಕ್ತಿಯಾಗಿದ್ದು ಈತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಂಪ್ಯೂಟರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ , ಕೋವೀಡ್ ನಿಯಮಾವಳಿಗಳ ಪ್ರಕಾರ ಕಳೆದ ಕೆಲವು ತಿಂಗಳುಗಳಿಂದ ವರ್ಕ್ ಫ್ರಮ್ ಹೋಮ್ ಕಾರ್ಯ ನಿರ್ವಹಿಸುತ್ತಿದ್ದ.
ಅತ್ಯಂತ ಸೌಮ್ಯ ಸ್ವಭಾವದವನಾಗಿದ್ದ ಯುವಕ ಶಿಕ್ಷಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತನ್ನ ತಾಯಿಯೊಂದಿಗೆ ವಾಸವಾಗಿದ್ದ ಸೋಮವಾರ ಮದ್ಯಾಹ್ನ ತಾಯಿ ಕರ್ತವ್ಯದ ನಿಮಿತ್ತ ಹೊರಗೆ ಹೋಗಿರುವ ಸಂದರ್ಭದಲ್ಲಿ ತನ್ನ ಕೋಣೆ ಬಾಗಿಲು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಪಿ.ಎಸ್. ಐ ಪ್ರವಿಣಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.