ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಿಂದ ರಾಮಲಲಾ ದರುಶನ ಪಡೆದು ವಾಪಾಸಾಗುತ್ತಿದ್ದ ರೈಲಿಗೆ ನುಗ್ಗಿ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದ ಯುವಕನ್ನು ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಗದಗದ ಬಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನಿಬ್ಬರು ತಪ್ಪಿಸಿಕೊಂಡಿದ್ದು, ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.
ಯಾತ್ರಿಕರಿದ್ದ ಬೋಗಿಗೆ ಮೂವರು ಯುವಕರು ಆಗಮಿಸಿ ಮಾತಿಗೆ ಮಾತು ಬೆಳೆಸಿದ್ದಾರೆ. ಜಗಳ ಅತಿರೇಕಕ್ಕೆ ಹೋದಾಗ ಬೆಂಕಿ ಹಚ್ಚುತ್ತೇವೆ ಎಂದು ಧಮ್ಕಿ ಹಾಕಿದ್ದಾರೆ.