ನಟ ಸಲ್ಮಾನ್​ ಖಾನ್ ಗೆ ಯೂಟ್ಯೂಬ್​ನಲ್ಲಿ ಕೊಲೆ ಬೆದರಿಕೆ ಹಾಕಿದ ಯುವಕ ಅರೆಸ್ಟ್​

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬಾಲಿವುಡ್ ನಟ ಸಲ್ಮಾನ್​ ಖಾನ್​ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗಡೆ ಗುಂಡಿನ ದಾಳಿ ನಡೆದಿದ್ದು, ಎರಡು ತಿಂಗಳಾಗಿದೆ.ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ದಾಳಿ ಮಾಡಿದ್ದು ತಾವೇ ಎಂದು ಕುಖ್ಯಾತ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿ ಗುಂಪಿನವರು ಒಪ್ಪಿಕೊಂಡಿದ್ದಾರೆ. ಇದಾಗಲೇ ಓರ್ವ ಆರೋಪಿ ಜೈಲಿನಲ್ಲಿಯೇ ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ.

ಇದೀಗ ಗುಂಡಿನ ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ಪೊಲೀಸರುರಾಜಸ್ಥಾನದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ರಾಜಸ್ಥಾನದ ಬುಂದಿ ಮೂಲದ 25 ವರ್ಷದ ಬನ್ವಾರಿಲಾಲ್ ಲಾತುರ್‌ಲಾಲ್ ಗುಜಾರ್ (25) ಎಂದು ಅಪರಾಧ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

ಗುರ್ಜರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೋವೊಂದನ್ನು ಅಪ್‌ಲೋಡ್ ಮಾಡಿದ್ದು, ಅದರಲ್ಲಿ ‘ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ಮತ್ತು ಇತರ ಗ್ಯಾಂಗ್ ಸದಸ್ಯರು ನನ್ನೊಂದಿಗಿದ್ದಾರೆ ಮತ್ತು ಸಲ್ಮಾನ್ ಖಾನ್ ಅವರು ಇನ್ನೂ ಕ್ಷಮೆ ಕೇಳದ ಕಾರಣ ನಾನು ಅವರನ್ನು ಕೊಲ್ಲಲಿದ್ದೇನೆ’ ಎಂದಿದ್ದನು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.

ಆರೋಪಿಯು ರಾಜಸ್ಥಾನದ ಹೆದ್ದಾರಿಯೊಂದರಲ್ಲಿ ವಿಡಿಯೋ ಮಾಡಿ ತನ್ನ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ್ದ. ತನಿಖೆಗಾಗಿ ತಂಡವನ್ನು ರಾಜಸ್ಥಾನಕ್ಕೆ ಕಳುಹಿಸಲಾಗಿತ್ತು. ಅಲ್ಲಿ ಆತನನ್ನು ಅರೆಸ್ಟ್​ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!