ಹೊಸ ದಿಗಂತ ವರದಿ,ಹಾಸನ :
ತಾಲ್ಲೂಕಿನ ಗೊರೂರಿನ ಹೇಮಾವತಿ ನದಿಯಲ್ಲಿ ಪಿಯುಸಿ ಪರೀಕ್ಷೆ ಬರೆದು ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲಾಗಿದ್ದು, ಆತನಿಗಾಗಿ ಶೋಧಕಾರ್ಯ ಮುಂದುವರೆದಿದೆ.
ರಘು (18) ಮೃತಪಟ್ಟ ಯುವಕ. ಹಾಸನದ ಆರ್.ಸಿ.ರಸ್ತೆಯಲ್ಲಿರುವ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಪಿಯುಸಿ ಪರೀಕ್ಷೆ ಬರೆದು ರಘು ತನ್ನ ಇಬ್ಬರು ಸ್ನೇಹಿತರೊಂದಿಗೆ ಈಜಲು ತೆರಳಿದ್ದ. ನದಿಗೆ ಇಳಿಯುವ ಮುನ್ನ ಶೆಟ್ಟಿಹಳ್ಳಿ ಚರ್ಚ್ ಬಳಿ ಫೋಟೋ ಶೂಟ್ ಮಾಡಿಸಿದ್ದ ರಘು ನಂತರ ಹೇಮಾವತಿ ನದಿಗೆ ಇಳಿದಿದ್ದಾನೆ. ಈಜಲು ಬಾರದ ಹಿನ್ನಲೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ರಘು ಶವಕ್ಕಾಗಿ ಪೊಲೀಸರು ಹಾಗೂ ಸ್ಥಳೀಯ ಈಜುಗಾರರು ಶೋಧಕಾರ್ಯ ನಡೆಸುತ್ತಿದ್ದಾರೆ.