ಸ್ನೇಹಿತನ ಸಹೋದರಿ ಮದುವೆ ಕಾರ್ಡ್‌ ಹಂಚಲು ಹೊರಟಿದ್ದ ಯುವಕರು ಭೀಕರ ಅಪಘಾತಕ್ಕೆ ಬಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸ್ನೇಹಿತನ ಮದುವೆ ಕಾರ್ಡ್‌ ಹಂಚೋದಕ್ಕೆ ಹೋದ ಸ್ನೇಹಿತರ ಕಾರ್‌ ಮರಕ್ಕೆ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ.

ಔಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು ಕಾರ್​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ  ಘಟನೆ ಕೋಲಾರ ‌ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ.

ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ ಮೃತ ದುರ್ದೈವಿಗಳು. ಇನ್ನು ಘಟನೆಯಲ್ಲಿ ಮತ್ತೋರ್ವ ಆಶ್ಚರ್ಯ ರೀತಿಯಲ್ಲಿ ಬಜಾವ್ ಆಗಿದ್ದಾರೆ. ಅದೃಷ್ಟವಶಾತ್​ ಬಂಗಾರಪೇಟೆಯ ಸಾಯಿ ಗಗನ್ ದುರಂತದಲ್ಲಿ ಬಚಾವ್ ಆಗಿದ್ದಾರೆ.

ಮೃತಪಟ್ಟ ಮೂವರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಯಿಗಗನ್ ಸೋದರಿ ಮದುವೆ ಆಮಂತ್ರಣ ಹಂಚಲು ಸ್ನೇಹಿತರೆಲ್ಲ ಕಾರಿನಲ್ಲಿ ಹೊರಟಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!