ಹೊಸದಿಗಂತ ರಾಯಚೂರು
ಸಂಕ್ರಾಂತಿ ಹಬ್ಬದ ಸಂಭ್ರಮದ ನಡುವೆಯೇ ರಾಯಚೂರು ಜಿಲ್ಲೆಯ ಚೀಕಲಪರ್ವಿ ಬಳಿ ಘೋರ ದುರಂತವೊಂದು ಸಂಭವಿಸಿದೆ. ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನಕ್ಕೆಂದು ಇಳಿದಿದ್ದ 17 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಮೃತನನ್ನು ರಾಜಲದಿನ್ನಿ ಗ್ರಾಮದ ನಿವಾಸಿ ವಂಶಿರಡ್ಡಿ (17) ಎಂದು ಗುರುತಿಸಲಾಗಿದೆ. ಈತ ಮಾನ್ವಿಯ ಜಯನಗರದಲ್ಲಿ ವಾಸವಾಗಿದ್ದು, ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸಂಕ್ರಾಂತಿ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ನದಿಗೆ ಸ್ನಾನ ಮಾಡಲು ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


