ಕೇರಳ ಲಾಟರಿಯಲ್ಲಿ 70 ಲಕ್ಷ ರೂ.ಗೆದ್ದ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚೆಗಷ್ಟೇ ಕೇರಳ ರಾಜ್ಯ ಲಾಟರಿಯಲ್ಲಿ 70 ಲಕ್ಷ ರೂ. ಗೆದ್ದಿದ್ದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಾಸರಗೋಡು ಜಿಲ್ಲೆಯ ಬಂಗ್ರಗುಡ್ಡೆಯ ನಿವಾಸಿ ವಿವೇಕ್ ಶೆಟ್ಟಿ (38) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ಈತನ ಮೃತದೇಹ ನೆಲ್ಲಿಕುಂಜೆ ರಸ್ತೆಯ ಬೇಕರಿ ಅಂಗಡಿಯೊಳಗಡೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ವಿಚಾರಣೆ ನಡೆಸಿದ್ದು, ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಾಸರಗೋಡು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!