ಐಫೋನ್‌ ಕೊಡಿಸದಿದ್ದಕ್ಕೆ ನೊಂದು ಯುವತಿ ಆತ್ಮಹತ್ಯೆ..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

‌ಐಫೋನ್‌ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ. ಪೋಷಕರು ತನಗೆ ಐಫೋನ್ ಕೊಡಿಸಲು ವಿಳಂಬ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಡಿ ಕೈಗಾರಿಕೆ ಮಾಡಿಕೊಂಡು ಜೀವನ ಸಾಗಿಸುತ್ತಿರುವ ದಂಪತಿಯ ಮಗಳು ಹಿಂಗನಾಳ ಪಟ್ಟಣದ ರಾಯ್ಸೋನಿ ಕಾಲೇಜಿನಲ್ಲಿ  ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಾಳೆ. ತನಗೆ ಐಫೋನ್‌ ಬೇಕು ಎಂದು ಯುವತಿ ಪೋಷಕರಲ್ಲಿ ಕೇಳಿದ್ದಾಳೆ. ಪೋಷಕರು ಸಹ ಐಫೋನ್ ಕೊಡಿಸುವುದಾಗಿ ಒಪ್ಪಿಕೊಂಡಿದ್ದಾರೆ. ಖರೀದಿಸಲು ಸ್ವಲ್ಪ ವಿಳಂಬ ಮಾಡಿದ ಕಾರಣ ಮನೆಯಲ್ಲಿಯೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!